ನಾಳೆ ಕೆಯು ಡಬ್ಲ್ಯುಜೆ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚಾರಣೆ.

ಬೆಂಗಳೂರು,15,2021(www.justkannada.in):  ನಾಳೆ ರಾಷ್ಟ್ರೀಯ ಪತ್ರಿಕಾ ದಿನಾಚಾರಣೆ ಅಂಗವಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ವಿಚಾರಣ ಸಂಕಿರಣ ಆಯೋಜನೆ ಮಾಡಲಾಗಿದೆ.

‘ಮಾಧ್ಯಮ ಕಂಡರೆ ಯಾರಿಗೆ ಭಯವಿಲ್ಲ..?’ ಕುರಿತು ವಿಚಾರಣ ಸಂಕಿರಣ ಹಮ್ಮಿಕೊಳ್ಳಲಾಗಿದ್ದು  ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕರ್ನಾಟಕ ಮಾಧ್ಯಮ ಆಕಾಡೆಮಿ ಕಚೇರಿ ವಿ,ವಿ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಜಗದೀಶ್ ಕಾರ್ಯಕ್ರಮವನ್ನ ಉದ್ಗಾಟಿಸಿ ಆಶಯನುಡಿಗಳನ್ನಾಡಲಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ, ಅಧ್ಯಕ್ಷತೆ ವಹಿಸಲಿದ್ದು, ಖ್ಯಾತ ನಟ ಮತ್ತು ನಿರ್ದೇಶಕ ರಮೇಶ್ ಅರವಿಂದ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾದ ಶಿವಾನಂದ ತಗಡೂರು, ಕೆ.ಕೆ ಮೂರ್ತಿ, ಶಿವಕುಮಾರ್ ಬೆಳ್ಳಿತಟ್ಟೆ, ಕೂಡ್ಲಿ ಗುರುರಾಜ್ ಸೇರಿ ಹಲವರು ಉಪಸ್ಥಿತರಿರಲಿದ್ದಾರೆ.

ಕೆಯುಡಬ್ಲ್ಯುಜೆ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚಾರಣೆ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಾಳೆ  ಬೆಳಿಗ್ಗೆ 12.45ಕ್ಕೆ ಕೆಯುಡಬ್ಲ್ಯುಜೆ ಸಭಾಂಗಣದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚಾರಣೆ ಹಮ್ಮಿಕೊಳ್ಳಲಾಗಿದ್ದು ಜಂಟಿ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಜಗದೀಶ್ ಕಾರ್ಯಕ್ರಮವನ್ನ ಉದ್ಗಾಟಿಸಲಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೋಳಿಮಠ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಹಾಗೂ ಕೆಯುಡಬ್ಲ್ಯುಜೆ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

Key words: Tomorrow – national press day -KUWJ -Karnataka Media Academy.