“ನಾಳೆಯಿಂದ ಸಾರಿಗೆ ನೌಕರರು ಮುಷ್ಕರ ಸಾಧ್ಯತೆ: ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಎಬಿವಿಪಿ ಆಗ್ರಹ

ಬೆಂಗಳೂರು,ಏಪ್ರಿಲ್,06,2021(www.justkannada.in) : ನಾಳೆಯಿಂದ ಸಾರಿಗೆ ನೌಕರರು ಮುಷ್ಕರ ಆರಂಭಿಸುವ ಸಾಧ್ಯತೆ  ಇದ್ದು,  ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅನಾನೂಕೂಲವಾಗದಂತೆ ಕ್ರಮವಹಿಸಲು ಸರ್ಕಾರವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.Illegally,Sand,carrying,Truck,Seized,arrest,driverಕಾಲೇಜು ವಿದ್ಯಾರ್ಥಿಗಳಿಗೆ ಈಗಾಗಲೆ ಪರೀಕ್ಷೆಗಳು ಆರಂಭವಾಗಿವೆ. ಬಹುತೇಕ ಎಲ್ಲಾ ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ಕೆಎಸ್ ಆರ್ ಟಿ ಸಿ ಬಸ್ ಗಳನ್ನೆ ಅವಲಂಬಿಸಿದ್ದಾರೆ. ಸಾರಿಗೆ ನೌಕರರು ಮುಷ್ಕರ ಆರಂಭಿಸಿದರೆ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗಲಿದೆ.  ಬಸ್ ಗಳಿಲ್ಲದೆ ವಿದ್ಯಾರ್ಥಿಗಳ ಪರದಾಡುವ ಸ್ಥಿತಿ ನಿರ್ಮಾಣ ಆಗಬಹುದು ಎಂದು ಆತಂಕವ್ಯಕ್ತಪಡಿಸಿದೆ.tomorrow-Transportation-Employees-strike-Likely-students-Don't-bothered-ABVP-Demand 

ಇದು ವಿದ್ಯಾರ್ಥಿಗಳ ಭವಿಷ್ಯದ ವಿಷಯವಾಗಿದೆ. ಸರ್ಕಾರ ಈ ಕೂಡಲೇ ಗಂಭೀರವಾಗಿ ಪರಿಗಣಿಸಬೇಕು ಎಂದು ಎಬಿವಿಪಿ ಆಗ್ರಹಿಸಿದೆ.

key words : tomorrow-Transportation-Employees-strike-Likely-students-Don’t-bothered-ABVP-Demand