ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನ ಸುರಕ್ಷಿತವಾಗಿ ಕರೆತರಲು ಕ್ರಮ- ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಆಗಸ್ಟ್,23,2021(www.justkannada.in): ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನ ಸುರಕ್ಷಿತವಾಗಿ ಕರೆತರಲು ಕ್ರಮ ವಹಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಘ್ಪಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯ ನಡೆಯುತ್ತಿದೆ. ಎಷ್ಟು ಕನ್ನಡಿಗರು ಸಿಲುಕಿದ್ದಾರೆ ಎಂದು ಮಾಹಿತಿ ಕಲೆ ಹಾಕಲಾಗುತ್ತಿದೆ. ದೂರದಲ್ಲಿರುವ ಕನ್ನಡಿಗರ ರಕ್ಷಣೆಗಾಗಿ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ವಿವಿಧೆಡೆ ಸಿಲುಕಿರುವ ಕನ್ನಡಿಗರನ್ನ ಪತ್ತೆ ಹಚ್ಚಿ ಕರೆತರುತ್ತೇವೆ ಎಂದು ಭರವಸೆ ನೀಡಿದರು.

ಇನ್ನು ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಮಾಣ ಕಡಿಮೆಯಾದರೇ ಶಾಲಾ-ಕಾಲೇಜು ಆರಂಭಕ್ಕೆ ಕ್ರಮ ಕೈಗೊಳ್ಳುತ್ತೇವೆ. 1 ರಿಂದ 8ನೇ ತರಗತಿಗೆ ಶಾಲೆ ಆರಂಭದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ತಜ್ಞರಿಗೆ ಶಾಲೆಗಳ ಆರಂಭಕ್ಕೆ ವರದಿ ನೀಡುವಂತೆ ಕೇಳಿದ್ದೇವೆ. ತಜ್ಞರ ಜೊತೆ ಚರ್ಚಿಸಿ ಶೀಘ್ರದಲ್ಲಿಯೇ ಪ್ರಾಥಮಿಕ ಶಾಲೆಗಳ ಆರಂಭದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Key words: Action – bring –Kannadiga’s-safe –Afghanistan- CM Basavaraja Bommai.