ರಾಜ್ಯಾದ್ಯಂತ ಆಯುಧಪೂಜೆಯ ಸಂಭ್ರಮ: ಮೈಸೂರು ಅರಮನೆಯಲ್ಲಿ ಪೂಜಾ ಕಾರ್ಯಕ್ರಮ

(File Photo)

ಮೈಸೂರು, ಅಕ್ಟೋಬರ್ 23, 2023 (www.justkannada.in): ನವರಾತ್ರಿಯ 9ನೇ ದಿನವಾದ ಇಂದು ರಾಜ್ಯಾದ್ಯಂತ ಆಯುಧಪೂಜೆಯ ಸಂಭ್ರಮ ಮನೆಮಾಡಿದೆ.

ಮೈಸೂರು ಅರಮನೆಯಲ್ಲಿ ಬೆಳಗ್ಗೆ 5.30ಕ್ಕೆ ಚಂಡಿಹೋಮದೊಂದಿಗೆ ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ.

ಬೆಳಗ್ಗೆ 9.30ಕ್ಕೆ ಚಂಡಿಹೋಮಪೂರ್ಣಾಹುತಿ ಕಾರ್ಯಕ್ರಮ ಮುಕ್ತಾಯವಾಗಲಿದೆ. ಬೆಳಿಗ್ಗೆ 11.45ಕ್ಕೆ ಕಲ್ಯಾಣ ಮಂಟಪಕ್ಕೆ ಪಟ್ಟಣದ ಆನೆ, ಕುದುರೆ, ಪಟ್ಟದ ಹಸು ಆಗಮಿಸಲಿದೆ. ಮಧ್ಯಾಹ್ನ 12.20 ನಿಮಿಷದಿಂದ ಮಧ್ಯಾಹ್ನ 12.45 ನಿಮಿಷದವರೆಗೆ ಆಯುಧ ಪೂಜೆ ನಡೆಯಲಿದೆ.

ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯುಧಪೂಜೆ ನೆರವೇರಿಸಲಿದ್ದಾರೆ. ಇನ್ನು  ಅಶ್ವಿನಿ ಮಾಸದ ಶುಕ್ಲಪಕ್ಷದ ನವಮಿ ದಿನ ಶಸ್ತ್ರಾಸ್ತ್ರ, ವಾಹನ ಹಾಗೂ ಯಂತ್ರಗಳ ಪೂಜೆ ಮಾಡಿದರೆ ಶುಭವಾಗಲಿದೆ ಎಂಬ ಪ್ರತೀತಿ ಇದೆ.