ಬೆಂಗಳೂರು,ಏಪ್ರಿಲ್,27,2023(www.justkannada.in): ಕೇಂದ್ರ ಗೃಹ ಸಚಿವ ಅಮಿತ್ ಶಾ, ಮತ್ತು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್ ನಾಯಕರ ನಿಯೋಗ ದೂರು ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ದೂರು ನೀಡಿದ್ದಾರೆ. ವಿ.ಸೋಮಣ್ಣ ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆಗಳು, ಘರ್ಷಣೆಗಳು, ಗಲಭೆಗಳು ಹೆಚ್ಚಾಗುತ್ತವೆ ಎಂಬ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಿ. ಸೊಮಣ್ಣ, ಅಮಿತ್ ಶಾ ವಿರುದ್ಧ ದೂರು ನೀಡಲಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ದೂರು ಸಲ್ಲಿಸಿದ ಬಳಿಕ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲಾ, ನಾವು ಒಂದು ಗಂಭೀರ ವಿಚಾರದ ಬಗ್ಗೆ ದೂರು ನೀಡಿದ್ದೇವೆ. ಚುನಾವಣೆ ಭಾಷಣದ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮುಗಲಭೆಗಳು ಆಗುತ್ತವೆ ಅಂತ ಅಮಿತ್ ಶಾ ಹೇಳಿದ್ದಾರೆ. ಈ ಹೇಳಿಕೆ ಸಮುದಾಯಗಳ ನಡುವೆ ಘರ್ಷಣೆ ಉಂಟು ಮಾಡುತ್ತವೆ . ಹೀಗಾಗಿ ದೂರು ನೀಡಿದ್ದೇವೆ ಎಂದರು.
Key words: Complaint – Congress- delegation –against- BJP leaders.