ಶೀಘ್ರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಿ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಎಂಎಲ್ಸಿಗಳ ಒತ್ತಾಯ

ಬೆಂಗಳೂರು, ಮೇ 17, 2020 (www.justkannada.in): ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರೊಂದಿಗೆ ವಿಡಿಯೋ ಸಂವಾದ ನಡೆಸಿ ಸಲಹೆ ಸೂಚನೆಗಳನ್ನು ಪಡೆದರು.

ಕೊರೋನಾ ನಂತರದ ಸಾಮಾಜಿಕ ಸ್ಥಿತಿಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಬಾಕಿ ಉಳಿದಿರುವ ಪಿಯುಸಿ ಇಂಗ್ಲಿಷ್ ಪರೀಕ್ಷೆ, ಶಾಲಾ ಶೈಕ್ಷಣಿಕ ವರ್ಷ ಆರಂಭ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಲಹೆ ಪಡೆದರು.

ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದರೂ ಕೊರೋನಾ ಹಿನ್ನೆಲೆಯಲ್ಲಿ ಈಗಾಗಲೇ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಮುಂದಿನ ಶೈಕ್ಷಣಿಕ ವರ್ಷ ಸಮಯಕ್ಕೆ ಸರಿಯಾಗಿ ಆರಂಭವಾಗುವ ಸಾಧ್ಯತೆಗಳಿಲ್ಲವಾದ್ದರಿಂದ ಶೈಕ್ಷಣಿಕ ವರ್ಷಕ್ಕೆ ದಿನಗಳು ಕೊರತೆಯಾಗುವ ಹಿನ್ನೆಲೆಯಲ್ಲಿ ಪಠ್ಯಕ್ರಮ ಕಡಿತ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯೊಂದಿಗೆ ತರಗತಿಗಳನ್ನು ಆರಂಭಿಸುವುದು, ಬೋಧನೆ, ತರಗತಿ ಮಾಡುವುದು, ಎಸ್ ಎಸ್ ಎಲ್ ಸಿ ಮತ್ತು ಪಿಯು ಪರೀಕ್ಷೆ, ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನ ಕುರಿತು ವಿಧಾನ ಪರಿಷತ್ ಸದಸ್ಯರು ಸಲಹೆ ಸೂಚನೆ ನೀಡಿದರು. ಜತೆಗೆ ಶೀಘ್ರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವಂತೆಯೂ ಮನವಿ ಮಾಡಿದ್ದಾರೆ.