ಟಿಪ್ಪುಜಯಂತಿ ರದ್ದು ಮಾಡುವಂತೆ ಸಿಎಂಗೆ ಪತ್ರ ಬರೆದು ಮನವಿ ಮಾಡಿದ ಶಾಸಕ ಕೆ.ಜಿ ಬೋಪಯ್ಯ..

ಬೆಂಗಳೂರು, ಜು. 30,2019(www.justkannada.in):  ಹಿಂದಿನ ಕಾಂಗ್ರೆಸ್ ಸರ್ಕಾರ ಅವಧಿಯಿಂದ ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ ಮಾಡಿಕೊಂಡು ಬಂದಿರುವ ಟಿಪ್ಪು ಜಯಂತಿಯನ್ನ ರದ್ದು ಮಾಡುವಂತೆ ಬಿಜೆಪಿ ಶಾಸಕ ಕೆ.ಜಿ ಬೋಪಯ್ಯ ಸಿಎಂ ಬಿ.ಎಸ್ ಯಡಿಯೂರಪ್ಪಗೆ  ಮನವಿ ಮಾಡಿದ್ದಾರೆ.

ಈ ಕುರಿತು ಸಿಎಂ ಬಿಎಸ್ ವೈಗೆ ಪತ್ರ ಬರೆದಿರುವ ಶಾಸಕ ಕೆ.ಜಿ ಬೋಪಯ್ಯ, ಈ ಹಿಂದಿನ ಸರ್ಕಾರದ(2014) ಅವಧಿಯಲ್ಲಿ ಟಿಪ್ಪು ಜಯಂತಿ ಆಚರಣೆಗೆ ನಿರ್ಧರಿಸಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರತಿ ವರ್ಷ ನವೆಂಬರ್ 10ರಂದು ರಾಜ್ಯಾದ್ಯಂತ ಸರಕಾರಿ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ. ಟಿಪ್ಪು ಜಯಂತಿ ಆಚರಣೆಯ ವಿರುದ್ಧ ರಾಜ್ಯದಲ್ಲಿ ಅದರಲ್ಲೂ ಪ್ರಮುಖವಾಗಿ ಕೊಡಗು ಜಿಲ್ಲೆಯಲ್ಲಿ ಈ ಹಿಂದೆ ಪ್ರತಿಭಟನೆ ನಡೆದಿದ್ದು, ಜಿಲ್ಲೆಯ ಜನರು ಟಿಪ್ಪು ಜಯಂತಿ ಆಚರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕಾರ್ಯಕ್ರಮವನ್ನು ಆಯೋಜಿಸುವುದರಿಂದ ಜಿಲ್ಲೆಯಲ್ಲಿ ಸಾವುನೋವುಗಳು ಸಂಭವಿಸಿದ್ದು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗುರುತ್ತದೆ. ಹಾಗೆಯೇ ಇಂದಿಗೂ  ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣವಿದ್ದು ಜನರ ನಡುವಿನ ಸಾಮರಸ್ಯ ಹದಗೆಟ್ಟಿದೆ. ಅದ್ದರಿಂದ ಟಿಪ್ಪು ಜಯಂತಿಯನ್ನ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವ ಸರ್ಕಾರದ ಆದೇಶವನ್ನ ಕೂಡಲೇ ರದ್ದುಪಡಿಸಲು ಆದೇಶ ನೀಡಬೇಕು ಎಂದು ಕೋರುತ್ತೇನೆ ಎಂದು ಕೆ.ಜಿ ಬೋಪಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಟಿಪ್ಪು ಜಯಂತಿಯನ್ನ ಆಚರಣೆಗೆ ಜಾರಿಗೆ ತಂದಿದ್ದರು. ಆದರೆ ಇದರಿಂದ ಸಾಕಷ್ಟು ವಿವಾದ ಉಂಟಾಗಿ ಕೊಡಗು ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆದಿದ್ದವು.

Key words: KG Bopaiah- letter – CM -requested – cancellation -Tipuja Jayanthi