ಬೆಂಗಳೂರು, ಅಕ್ಟೋಬರ್,11,2022(www.justkannada.in): ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಲು ಅಧಿಕಾರಿಗಳು ಸಲ್ಲಿಸಿದ್ದ ಪ್ರಸ್ತಾವನೆಯನ್ನು ತಿರಸ್ಕರಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರವನ್ನು ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಸ್ವಾಗತಿಸಿದ್ದಾರೆ.
ಈ ವಿಷಯದ ಬಗ್ಗೆ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮುಖ್ಯಮಂತ್ರಿಗಳ ಗಮನ ಸೆಳೆದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂತಹ ಪ್ರಸ್ತಾವನೆ ತಿರಸ್ಕರಿಸುವ ನಿರ್ಧಾರ ಪ್ರಕಟಿಸಿದ್ದು, ಹಿಂದಿನ ವ್ಯವಸ್ಥೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ 5963 ಗ್ರಾಮ ಪಂಚಾಯಿತಿಗಳಿವೆ. 91,500 ಸದಸ್ಯರು ಜನರಿಂದ ನೇರವಾಗಿ ಆಯ್ಕೆಯಾಗಿದ್ದಾರೆ. ಅಭಿವೃದ್ಧಿಯ ದೃಷ್ಟಿಯಿಂದ ಗ್ರಾಮ ಪಂಚಾಯಿತಿ ಸದಸ್ಯರು ಜನರಿಂದ, ಜನರಿಗೋಸ್ಕರ ಆಯ್ಕೆಯಾಗಿ ಸ್ಥಳೀಯವಾಗಿ ಜನರ ಸರ್ಕಾರವನ್ನು ರಚಿಸುತ್ತಾರೆ. ಇವರ ಅಧಿಕಾರಗಳನ್ನು ಕಡಿತ ಮಾಡಿದರೆ ಪ್ರಜಾತಂತ್ರ ವ್ಯವಸ್ಥೆಯ ಭದ್ರ ಬುನಾದಿಗೆ ಧಕ್ಕೆ ತಂದಂತೆ. ಇಂತಹ ಪ್ರಯತ್ನ ತಡೆಹಿಡಿಯಬೇಕು ಎಂದು ದಿನೇಶ್ ಗೂಳಿಗೌಡ ಅವರು ಪತ್ರದಲ್ಲಿ ಪ್ರತಿಪಾದಿಸಿದ್ದರು.
Key words: MLC-Dinesh Gooligowda- welcomed – CM’s decision -power –Gram panchayath-chairman