ಚಾಮರಾಜನಗರ,ಮೇ,4,2019(www.justkannada.in): ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರಿಕೆಗೆ ಸುಪ್ರೀಂ ಹಸಿರು ನಿಶಾನೆ ತೋರಿದೆ. ಬಂಡೀಪುರದ ಮೂಲೆಹೊಳೆ ಮೂಲಕ ಕೇರಳ ರಾಜ್ಯಕ್ಕೆ ರಾತ್ರಿ ಸಂಚಾರ ಮುಕ್ತ ಮಾಡುವಂತೆ ಮನವಿ ಮಾಡಿದ್ದ ಕೇರಳ ಮುಖಭಂಗ ಅನುಭವಿಸಿದೆ.
ಚಾಮರಾಜನಗರ ಜಿಲ್ಲೆಯ ಜೀವ ವೈವಿಧ್ಯದ ಸ್ವರ್ಗ ಬಂಡೀಪುರದಲ್ಲಿ ರಾತ್ರಿ ವಾಹನಗಳ ಸಂಚಾರ ನಿಷೇಧವನ್ನು ಮುಂದುವರೆಸಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಬಂಡೀಪುರ ಉದ್ಯಾನವನದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿರ್ಬಂಧ ಮುಂದುವರೆದಿರುವುದರಿಂದ ಕೇರಳ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಪರಿಸರ ಮತ್ತು ಅರಣ್ಯ ಸಚಿವಾಲಯ ಜಂಟಿಯಾಗಿ ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದ್ದವು.
ಬಂಡೀಪುರ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ರಾತ್ರಿ ವೇಳೆ ಸಂಚಾರದ ನಿಷೇಧ ನಿರ್ಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತನ್ನ ನಿಲುವು ತಿಳಿಸಿವೆ. ಕೇಂದ್ರ ಸರ್ಕಾರ ಸಲ್ಲಿಸಿರುವ ಅಫಿಡವಿಟ್ಗೆ , ಕೇರಳ ಸರ್ಕಾರ ಪ್ರತಿಕ್ರಿಯಿಸುವುದಾಗಿ ಹೇಳಿರುವುದರಿಂದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.
2010ರಲ್ಲಿ ಕರ್ನಾಟಕ ಹೈಕೋರ್ಟ್ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ವನ್ಯಜೀವಿಗಳ ಸಂರಕ್ಷಣೆಯ ದೃಷ್ಟಿಯಿಂದ ರಾತ್ರಿ ವೇಳೆ ಸಂಚಾರಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. 2009ರಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಮನೋಜ್ ಕುಮಾರ್ ಮೀನಾ ಅವರ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್
2009 ರಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಮನೋಜ್ ಕುಮಾರ್ ಮೀನಾ ರವರ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರಿಕೆಗೆ ನಿರ್ದೇಶನ ನೀಡಿದೆ.
Key words: Supreme Court – green signal – continuous- night –traffic- ban- Bandipur.