Sunday, September 20, 2026

BDA Apartments

ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಕಾನ್ಸ್ ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತ...
Home Crime ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಕಾನ್ಸ್ ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ.

ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಕಾನ್ಸ್ ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ.

ಕಲಬುರಗಿ,ಜೂನ್,16,2023(www.justkannada.in): ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಕಾನ್ಸ್ ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ  ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ಈ ಘಟನೆ ನಡೆದಿದೆ.  ಹೆಡ್​​ ಕಾನ್​ಸ್ಟೇಬಲ್​ ​ಮೈಸೂರ್ ಚೌಹಾಣ್ ​(51) ಹತ್ಯೆಯಾದವರು.

ಅಕ್ರಮ ಮರಳು ಸಾಗಾಟ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ 10 ಗಂಟೆ ವೇಳೆಗೆ ಮೈಸೂರ್ ಚೌಹಾಣ್ ಅವರು ತಪಾಸಣೆಗೆ ಹೋಗಿದ್ದರು. ಆ ವೇಳೆ ದುಷ್ಕರ್ಮಿಗಳು ಬೈಕ್ ​​ನಲ್ಲಿ ಹೋಗುತ್ತಿದ್ದ ಮೈಸೂರ್​​ ಚೌಹಾಣ್​ ಮೇಲೆ ಟ್ರ್ಯಾಕ್ಟರ್ ಹರಿಸಿದ್ದಾರೆ. ಟ್ರ್ಯಾಕ್ಟರ್​ ಚಕ್ರಕ್ಕೆ ಸಿಲುಕಿದ ಮೈಸೂರ್ ಚೌಹಾಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಕಾನ್ಸ್ ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತ...

ಮೈಸೂರ್ ಚೌಹಾನ್ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪೂರ್ ತಾಂಡಾ ನಿವಾಸಿಯಾಗಿದ್ದು, ನೆಲೋಗಿ ಠಾಣೆಯಲ್ಲಿ ಹೆಡ್ ಕಾನ್​​​ ಸ್ಟೇಬಲ್​​ ಆಗಿ ಸೇವೆ ಸಲ್ಲಿಸುತ್ತಿದ್ದರು. ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಓರ್ವ ಆರೋಪಿಯನ್ನ ಬಂಧಿಸಿದ್ದಾರೆ.

Key words: tractor- stop – illegal- sand – killed- constable