ಕೊಪ್ಪಳ, ಮೇ,15,2026 (www.justkannada.in): ಹಿಂದಿನಿಂದ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಉರುಳಿಬಿದ್ದು ಒಂದೇ ಕುಟುಂಬದ 6 ಮಂದಿ ಅಸುನೀಗಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ನಡೆದಿದೆ.
ಮುನಿರಾಬಾದ್ ಸಮೀಪದ ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಉರುಳಿ ಈ ದುರಂತ ಸಂಭವಿಸಿದೆ. ಭೀಕರ ರಸ್ತೆ ಅಪಘಾತದಲ್ಲಿ ಒಂದು ಮಗು ಸೇರಿ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹುಲಿಗೆಮ್ಮ ದೇವಸ್ಥಾನಕ್ಕೆ ದೇವರ ಕಾರ್ಯಕ್ಕಾಗಿ ಕುಟುಂಬಸ್ಥರು ಟ್ರ್ಯಾಕ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ, ಹಿಂಬದಿಯಿಂದ ವೇಗವಾಗಿ ಬಂದ ಟ್ಯಾಂಕರ್ ಲಾರಿ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಸೇತುವೆ ಮೇಲಿಂದ ಕೆಳಗೆ ಬಿದ್ದಿದೆ ಎನ್ನಲಾಗಿದೆ.
ಮೃತರು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬ ಮಾಹಿತಿ ಲಭ್ಯವಾಗಿದೆ . ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ತುರ್ತುವಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ.
Key words: tractor, falls off, bridge, Six people, death







