ವಾಹನ ಸವಾರರಿಗೆ ಗುಡ್ ನ್ಯೂಸ್: ಶೇ 50 ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಅವಕಾಶ

ಬೆಂಗಳೂರು, ನವೆಂಬರ್, 20,2025 (www.justkannada.in): ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು ಸಂಚಾರ ನಿಯಮ ಉಲ್ಲಂಘನೆ ದಂಡವನ್ನ ಶೇ 50ರಷ್ಟು ರಿಯಾಯಿತಿಯಲ್ಲಿ ಪಾವತಿಸಲು ಮತ್ತೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.

ಹೌದು  ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ  ಮೇಲೆ 50% ರಿಯಾಯಿತಿ ಘೋಷಿಸಲಾಗಿದ್ದು,  ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಇಂದು (ನವೆಂಬರ್ 20) ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ಸೌಲಭ್ಯವು ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ  ವಾಹನ ಸವಾರರು ತಮ್ಮ ಬಾಕಿ ಟ್ರಾಫಿಕ್ ದಂಡದಲ್ಲಿ ಅರ್ಧ ಮೊತ್ತವನ್ನು ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಸಂಚಾರ ದಂಡ ರಿಯಾಯಿತಿ ಕುರಿತಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ, ಸರ್ಕಾರವು ಅದನ್ನು ಅಂಗೀಕರಿಸಿ ತಕ್ಷಣ ಜಾರಿಗೆ ತರಲು ಆದೇಶ ಹೊರಡಿಸಿದೆ.

ಇತ್ತೀಚೆಗೆ ರಾಜ್ಯ ಸರ್ಕಾರ ಸಂಚಾರ ನಿಯಮ ಉಲ್ಲಂಘನೆ ದಂಡದ  ಮೇಲೆ 50% ರಿಯಾಯಿತಿ ಘೋಷಿಸಿತ್ತು. ಇದರಿಂದ ಸರ್ಕಾರಕ್ಕೆ ಆದಾಯ ಹರಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ಈ ಆಫರ್ ನೀಡಲಾಗಿದೆ.

Key words: Traffic fines, again, 50% discount, Government