Wednesday, September 16, 2026

BDA Apartments

Home Front Page ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ-ರೈಲು ದುರಂತ ಕುರಿತು ಸಿಎಂ ಸಿದ್ಧರಾಮಯ್ಯ ಟ್ವೀಟ್.

ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ-ರೈಲು ದುರಂತ ಕುರಿತು ಸಿಎಂ ಸಿದ್ಧರಾಮಯ್ಯ ಟ್ವೀಟ್.

ಬೆಂಗಳೂರು,ಜೂನ್,3,2023(www.justkannada.in):  ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದ ದುರಂತದ ಬಗ್ಗೆ ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದು, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವ ಭರವಸೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ‍್ಧರಾಮಯ್ಯ, ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ.ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ si...

ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ. “ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ ಎಂದು ಸಿದ್ಧರಾಮಯ್ಯ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

Key words: train -accident-odisha- Kannadigas -safely -CM Siddaramaiah- tweet