ತರಬೇತಿ ವಿಮಾನ ತುರ್ತು ಭೂಸ್ಪರ್ಶ.

ಬೆಳಗಾವಿ,ಮೇ,30,2023(www.justkannada.in):  ಬೆಳಗಾವಿಯಲ್ಲಿ ತರಬೇತಿ ವಿಮಾನವೊಂದು ತುರ್ತು ಭೂಸ್ಪರ್ಶವಾಗಿರುವ ಘಟನೆ ನಡೆದಿದೆ.

ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಏರ್ ಫೋರ್ಸ್ ಅಧಿಕಾರಿಗಳು ದೌಡಾಯಿಸಿದರು.

ಸಾಂಬ್ರಾ ಏರ್ ಪೋರ್ಟ್ ನಿಂದ ಹೊರಟಿದ್ದ ತರಬೇತಿ ವಿಮಾನ ವಿಮಾನ ತಾಂತ್ರಿಕ ಸಮಸ್ಯೆಯಿಂದ ತುರ್ತು ಭೂಸ್ಪರ್ಶವಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದೆ.

Key words: Training -aircraft – emergency –landing-belgavi