Friday, August 14, 2026

BDA Apartments

Home Front Page ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ 6 ಐಪಿಎಸ್ ಅಧಿಕಾರಿಗಳ ವರ್ಗಾವಣೆ.

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ 6 ಐಪಿಎಸ್ ಅಧಿಕಾರಿಗಳ ವರ್ಗಾವಣೆ.

ಬೆಂಗಳೂರು,ಫೆಬ್ರವರಿ,23,2023(www.justkannada.in): ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಸೇರಿದಂತೆ  ಆರು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ  ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು  ರೈಲ್ವೆ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಕ ಮಾಡಿ ಆದೇಶಿಸಲಾಗಿದೆ.

ಹಾಗೆಯೇ ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಡೆಕ್ಕ ಕಿಶೋರ್ ಬಾಬು ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ದಕ್ಷಿಣ ವಿಭಾಗದ ಟ್ರಾಫಿಕ್​ ಡಿಸಿಪಿಯಾಗಿ ಮೊಹಮ್ಮದ್ ಸುಜೀತ, ಬೆಂಗಳೂರು ನಗರ ಸಿಎಆರ್​ನ ಡಿಸಿಪಿಯಾಗಿ ಅರುಣಾಂಗ್ಷು ಗಿರಿ ಅವರನ್ನು ನೇಮಿಸಿ ಆದೇಶಿಸಲಾಗಿದೆ.

ಇನ್ನು ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ ಯಾಗಿ ಯಶೋಧಾ ವಂಟಗೋಡಿ ಅವರನ್ನು ನೇಮಕ ಮಾಡಲಾಗಿದೆ. ಇನ್ನು, KSRP 1ನೇ ಬೆಟಾಲಿಯನ್ ಕಮಾಂಡೆಂಟ್ ಆಗಿರುವ ಡಾ.ಕೋನ ವಂಶಿಕೃಷ್ಣ ಅವರಿಗೆ ವೈರ್​ಲೆಸ್​ ಎಸ್​ಪಿ ಹುದ್ದೆ ಹೆಚ್ಚುವರಿ ಹೊಣೆಯಾಗಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

Key words: Transfer – 6 IPS- officers – Mangalore- Police- Commissioner- Shashikumar.