Saturday, August 8, 2026

BDA Apartments

Home Front Page ವರ್ಗಾವಣೆ ದಂಧೆ ಆರೋಪ:  ಮಾಜಿ ಸಿಎಂ ಹೆಚ್.ಡಿಕೆಗೆ ಸಿಎಂ ಬಿಎಸ್ ವೈ ತಿರುಗೇಟು…

ವರ್ಗಾವಣೆ ದಂಧೆ ಆರೋಪ:  ಮಾಜಿ ಸಿಎಂ ಹೆಚ್.ಡಿಕೆಗೆ ಸಿಎಂ ಬಿಎಸ್ ವೈ ತಿರುಗೇಟು…

ಬೆಂಗಳೂರು,ಆ,19,2019(www.justkannada.in): ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ.  ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರರನ್ನೇ ಇದರ ಹಿಂದೆ ಬಿಟ್ಟಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ಏನೇನು ಮಾಡಿದ್ದಾರೆ ಎಂಬುದು ಇಡೀ ಜಗತ್ತಿಗೇ ತಿಳಿದಿದೆ. ಆ ಬಗ್ಗೆ ತಮ್ಮ ಬಾಯಿಂದ  ಏಕೆ ಹೇಳಿಸುತ್ತೀರಿ..? ‌ ಜನರಿಗೆ ಎಲ್ಲವೂ ಗೊತ್ತಿದೆ. ಹೆಚ್.ಡಿ ಕುಮಾರಸ್ವಾಮಿ ಅವರಿಗೆ ದೇವರು ಒಳ್ಳೆಯದು ಮಾಡಲೀ ಎಂದು ಹೇಳಿದರು.

ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ರಾಜಭವನದಲ್ಲಿ ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದೆ. ನಾಳೆ ಬೆಳಿಗ್ಗೆ 10.30ರಿಂದ 11.30ರೊಳಗೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

Key words: Transfer-hd kumaraswamy-  cm bs yeddyurappa- bangalore