Thursday, August 6, 2026

BDA Apartments

Home Front Page ರಾಜ್ಯೋತ್ಸವ ದಿನದಂದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸ್ಥಾನಾಂತರ

ರಾಜ್ಯೋತ್ಸವ ದಿನದಂದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸ್ಥಾನಾಂತರ

ಮೈಸೂರು,ಅಕ್ಟೋಬರ್,29,2020(www.justkannada.in) : ಭಾರತೀಯ ಭಾಷಾ ಸಂಸ್ಥಾನದ ವತಿಯಿಂದ ನವೆಂಬರ್ 01 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ ಮತ್ತು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸ್ಥಾನಾಂತರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.jk-logo-justkannada-logo

ಮೈಸೂರು ವಿವಿ ಎನ್.ಸಿ.ಎಚ್.ಎಸ್.ಅತಿಥಿ ಗೃಹ ಆವರಣದಲ್ಲಿ ಅಂದು ಮಧ್ಯಾಹ್ನ 2ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪದ್ಮಶ್ರೀ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪ್ರೊ.ಚಂದ್ರಶೇಖರ ಕಂಬಾರ, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಆಗಮಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಭಾಷಾ ಸಂಸ್ಥಾನ ನಿರ್ದೇಶಕ ಪ್ರೊ.ಸಿ.ಜಿ.ವೆಂಕಟೇಶ್ ಮೂರ್ತಿ ವಹಿಸಿಕೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Transfer-classical-Kannada-center-study-Rajyotsava-day

key words : Transfer-classical-Kannada-center-study-Rajyotsava-day