ಟ್ರಾನ್ಸ್ ಫಾರ್ಮರ್ ಸ್ಪೋಟ: ವಿದ್ಯುತ್ ಪ್ರವಹಿಸಿ 10ಕ್ಕೂ ಹೆಚ್ಚು ಮಂದಿ ಸಾವು.

 ಉತ್ತರಾಖಂಡ್,ಜುಲೈ,19,2023(www.justkannada.in): ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ವಿದ್ಯುತ್ ಪ್ರವಹಿಸಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆದಿದೆ.

ನಮಾಮಿ ಗಂಗೆ ಯೋಜನೆ ಕಾಮಗಾರಿ ವೇಳೆ ಈ ದುರಂತ  ಸಂಭವಿಸಿದೆ.  ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಮಾಮಿ ಗಂಗೆ ಯೋಜನೆಯಲ್ಲಿ ತೊಡಗಿದ್ದ ವೇಳೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಈ ವೇಳೆ 10ಕ್ಕೂ ಮಂದಿ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದು ಅವರನ್ನು ಚಮೋಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳಲ್ಲೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

Key words: Transformer-explosion-10 people -died – electrocution.