ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು ಜುಲೈ,14,2023(www.justkannada.in):   ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯತು.

ಟೆಂಡರ್ ಪ್ರಕ್ರಿಯೆಗಳಲ್ಲಿಸರ್ಕಾರದ ಬೊಕ್ಕಸಕ್ಕೆ ಉಳಿತಾಯ ಹಾಗೂ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯ ತಿದ್ದುಪಡಿಗಳನ್ನು ಒಳಗೊಂಡಿರುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಇದಾಗಿದೆ.

ಈ ವಿಧೇಯಕದಲ್ಲಿ ಎಸ್​ಸಿ, ಎಸ್​​​ಟಿ ಗುತ್ತಿಗೆದಾರರಿಗೆ ಟೆಂಡರ್ ವಿನಾಯಿತಿಗೆ ಅವಕಾಶ ನೀಡಲಾಗಿದೆ. 50 ಲಕ್ಷದಿಂದ 1 ಕೋಟಿ ರೂ.ಗೆ ಟೆಂಡರ್ ವಿನಾಯಿತಿ ಮಿತಿ ಹೆಚ್ಚಳ ಮಾಡಲಾಗಿದೆ.

Key words: Transparency- Public- Procurement -Amendment Bill -passed – Assembly