ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರಿಗೆ ನೋಟಿಸ್

ಬೆಂಗಳೂರು.ಆಗಸ್ಟ್,6,2025 (www.justkannada.in):  ನಿನ್ನೆ ನಡೆದ ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ನಿನ್ನೆಯೇ ಇಲಾಖೆ ವಾಟ್ಸಪ್ ಮೂಲಕ ನೋಟಿಸ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ಇದೀಗ ಸಾರಿಗೆ ಇಲಾಖೆ ಶಾಕ್ ನೀಡಿದ್ದು ನೋಟಿಸ್ ಜಾರಿಗೊಳಿಸಿದೆ. ಹಾಗೆಯೇ ಇಂದು ಹ್ಯಾಂಡ್ ನೋಟಿಸ್ ನೀಡಲು ಮುಂದಾಗಿದೆ. ಇಂದಿನಿಂದ ಸಸ್ಪೆಂಡ್ ಮತ್ತು ನಾಳೆಯಿಂದ ಡಿಸ್ಮಿಸ್ ಮಾಡಲು ಪ್ಲಾನ್ ರೂಪಿಸಿದೆ ಎನ್ನಲಾಗಿದೆ.

38 ತಿಂಗಳ ಬಾಕಿವೇತನ ಮತ್ತು ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ನಿನ್ನೆ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಹೂಡಿದ್ದರು. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಷ್ಕರಕ್ಕೆ ಎರಡು ದಿನಗಳ ತಡೆಯಾಜ್ಞೆ ನೀಡಿದೆ. ಅಲ್ಲದೆ ಸಾರಿಗೆ ಸಂಘಟನೆಗಳಿಗೆ ನೋಟಿಸ್ ನೀಡಿದೆ.

Key words: Notice , transport, employees, strike