ಸಾರಿಗೆ ನೌಕರರ ವೇತನ ವಿಳಂಬ; ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತರಾಟೆ.

ಬೆಂಗಳೂರು,ಅಕ್ಟೋಬರ್,5,2021(www.justkannada.in):  ರಾಜ್ಯ ಸಾರಿಗೆ ನೌಕರಿಗೆ ವೇತನ ವಿಳಂಬ ಮಾಡುತ್ತಿರುವ ಹಿನ್ನೆಲೆ ಸರ್ಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ  ಹೆಚ್.ಡಿ ಕುಮಾರಸ್ವಾಮಿ, ಕೂಡಲೇ ಸಾರಿಗೆ ನೌಕರರಿಗೆ ವೇತನ ಪಾವತಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರನ್ನು ಒತ್ತಾಯ ಮಾಡಿದ್ದಾರೆ.

ಕೋರೋನ ಮಹಾಮಾರಿಯಿಂದ ತತ್ತರಿಸಿರುವ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ನೌಕರರ ಮೇಲೆ ಸರಕಾರಕ್ಕೆ ಅನಾದರ ಏಕೆ? ಈ ನೌಕರರಿಗೆ ಅಗಸ್ಟ್ ತಿಂಗಳಲ್ಲಿ ಅರ್ಧ ಸಂಬಳವೇ ಆಗಿದ್ದು, ಸೆಪ್ಟೆಂಬರ್ ತಿಂಗಳ ಪೂರ್ಣ ಸಂಬಳ ಆಗಿಲ್ಲ ಎನ್ನುವ ಮಾಹಿತಿ ನನಗೆ ಬಂದಿದೆ.

ಮಕ್ಕಳು ತಪ್ಪು ಮಾಡುವುದು ಸಹಜ. ತಂದೆ ತಾಯಿ ಸ್ಥಾನದಲ್ಲಿರುವ ಸರಕಾರ ಕ್ಷಮಿಸಿ ಔದಾರ್ಯ ತೋರಿಸುವ ದೊಡ್ಡ ಮನಸ್ಸು ಮಾಡಬೇಕು. ಸಾರಿಗೆ ನೌಕರರ ಮೇಲೆ ಹಗೆತನ ಸಾಧಿಸುವುದು ಬೇಡ. ಜೀವದ ಹಂಗು ತೊರೆದು, ಮಹಾಮಾರಿಯನ್ನು ಲೆಕ್ಕಿಸದೆ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಾರಿಗೆ ನೌಕರರ ವೇತನ ವಿಳಂಬ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ತಕ್ಷಣವೇ ವೇತನ ಬಿಡುಗಡೆ ಮಾಡಬೇಕು. ಪ್ರತಿ ತಿಂಗಳು ಸಕಾಲಕ್ಕೆ ವೇತನ ಪಾವತಿಸಲು  ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಕೂಡಲೇ ಕ್ರಮ ವಹಿಸಬೇಕು ಎಂದು ನಾನು ಒತ್ತಾಯ ಮಾಡುತ್ತೇನೆ ಎಂದು ಹೆಚ್.ಡಿಕೆ ಟ್ವೀಟ್ ಮಾಡಿದ್ದಾರೆ.

Key words: Transport –Employees- Pay- Delay-Former CM -HD Kumaraswamy – government

ENGLISH SUMMARY…

Delay in payment of salaries to transport dept. employees; Former CM HDK lambasts State Govt.
Bengaluru, October 5, 2021 (www.justkannada.in): Former Chief Minister H.D. Kumaraswamy has lambasted the State Government for delay in giving salaries to the transport department employees.
In his tweet the former CM has demanded the Chief Minister Basavaraj Bommai and Transport Minister B.Sriramulu to pay the salaries immediately. “The KSRTC and BMTC employees are already in deep trouble due to the effect of the COVID-19 pandemic lockdown. Why is the government treating them like this? They have received only half month salary in the month of August, September month’s salary is completely pending.
This delay is not acceptable at all. I demand the government to take measures immediately to clear the salaries,” his tweet read.
Keywords: Former CM H.D.Kumaraswamy/ Transport Department employees/ salaries delay