ಬೆಂಗಳೂರು,ಫೆಬ್ರವರಿ,19,2026 (www.justkannada.in): ವೇತನ ಹಿಂಬಾಕಿ ವೇತನ ಪರಿಷ್ಕರಣೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಸಾರಿಗೆ ನೌಕರರು ಸಿಡಿದೆದ್ದಿದ್ದು ಇಂದಿನಿಂದ ಮುಷ್ಕರ ಹೂಡಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರ 26 ತಿಂಗಳ ಹಿಂಬಾಕಿ ನೀಡಲು ಸಮ್ಮತಿಸಿದ್ದು ಆದರೆ ಸರ್ಕಾರದ ಆಫರ್ ಗೆ ಒಪ್ಪದ ಸಾರಿಗೆ ನೌಕರರು 38 ತಿಂಗಳ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಮಾಡುವಂತೆ ಆಗ್ರಹಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಧರಣಿ ನಡೆಸುತ್ತಿದ್ದು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಸಂಜೆ 4 ಗಂಟೆಯೊಳಗೆ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದಾರೆ.
ಅಲ್ಲದೆ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ನಾಳೆಯಿಂದ ಬೆಂಗಳೂರು ಚಲೋ ಹೋರಾಟವನ್ನ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರು ಚಲೋ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ರಾಜ್ಯದ ಬಹುತೇಕ ಕಡೆಗಳಲ್ಲಿ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದಿನಂತೆ ನೌಕರರು ಸೇವೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.
Key words: Transport, employees, protest, government







