ಸಾರಿಗೆ ನೌಕರರ ಮುಷ್ಕರ: ರಸ್ತೆಗಿಳಿಯದ ಸರ್ಕಾರಿ ಬಸ್ ಗಳು : ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು, ಆಗಸ್ಟ್, 5,2025 (www.justkannada.in): 38 ತಿಂಗಳ ಬಾಕಿ ಮತ್ತು ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು  ಹಲವೆಡೆ  ಸರ್ಕಾರಿ ಬಸ್ ಗಳ ಸಂಚಾರ ಬಂದ್ ಆಗಿದೆ.

ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್‌ ಗಳು ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಟ ನಡೆಸುತ್ತಿದ್ದಾರೆ.  ಬೆಳಿಗ್ಗೆಯಿಂದಲೂ ಬಸ್ ಇಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಭಾಗಶಃ ತಟ್ಟಿದೆ. ಹಲವೆಡೆ ಬಸ್ ​​ಗಳು ಸಂಚರಿಸುತ್ತಿವೆ. ಏರ್​​ಪೋರ್ಟ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಯಶವಂತಪುರ ಬಸ್​ ನಿಲ್ದಾಣಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.

ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ. ಈ ಮಧ್ಯೆ, ಸರ್ಕಾರದ ಸೂಚನೆ ದೊರೆಯುತ್ತಿದ್ದಂತೆಯೇ ಜಿಲ್ಲೆಗಳ ಸಾರಿಗೆ ನಿಗಮದ ಮುಖ್ಯಸ್ಥರು ಪ್ರತ್ಯೇಕ ವ್ಯವಸ್ಥೆಗಳನ್ನ ಮಾಡಿಕೊಂಡಿದ್ದಾರೆ.

ಪರೀಕ್ಷೆಗಳು ಮುಂದೂಡಿಕೆ

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ತುಮಕೂರು ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ತುಮಕೂರು ವಿವಿಯ ಸ್ನಾತಕಪೂರ್ವ ಹಾಗೂ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆಯಾಗಿದೆ.

ಹಾಗೆಯೇ ಕೊಪ್ಪಳ ವಿವಿಯ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಪರೀಕ್ಷೆ ಮುಂದೂಡಲಾಗಿದೆ .ಶೀಘ್ರವೇ ಪರೀಕ್ಷೆಯ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಕೊಪ್ಪಳ ವಿವಿ ಕುಲಪತಿ ಬಿಕೆ ರವಿ ತಿಳಿಸಿದ್ದಾರೆ.

Key words: Transport, employees, strike, Government bus Bandh