Thursday, August 27, 2026

BDA Apartments

Home Front Page ನಾಳೆ ಸಾರಿಗೆ ಸಂಸ್ಥೆ ನೌಕರರಿಂದ ಉಪವಾಸ ಸತ್ಯಾಗ್ರಹ: ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ…

ನಾಳೆ ಸಾರಿಗೆ ಸಂಸ್ಥೆ ನೌಕರರಿಂದ ಉಪವಾಸ ಸತ್ಯಾಗ್ರಹ: ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ…

ಬೆಂಗಳೂರು,ಫೆ,19,2020(www.justkannada.in): ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆ ಸಾರಿಗೆ ಸಂಸ್ಥೆ ನೌಕರರು ಪ್ರತಿಭಟನೆ ನಡೆಸಲಿದ್ದು ಈ ಹಿನ್ನೆಲೆ ನಾಳೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ರಾಜ್ಯ ರಸ್ತೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ  ಸಿಬ್ಬಂದಿ ನಾಳೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ನಾಳೆ  ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ  ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರು ಸತ್ಯಾಗ್ರಹ ಕೈಗೊಂಡಿದ್ದಾರೆ.

ರಾಜ್ಯ ಬಜೆಟ್ ನಲ್ಲಿ   ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಘೋಷಿಸಬೇಕೆಂದು ಆಗ್ರಹಿಸಿ ಈ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿದ್ದು,  ಬಿಎಂಟಿಸಿ, ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ, ಕೆಎಸ್‌ಆರ್ಟಿಸಿ ನಿಗಮಗಳ 2000 ಕ್ಕೂ ಹೆಚ್ಚು ನೌಕರರು, ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಕೂಡ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: transport – employees -: tomorrow-protest-bus traffic.