ಬೆಂಗಳೂರು,ಆಗಸ್ಟ್,4,2025 (www.justkannada.in): ಸಾರಿಗೆ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಇಂದು ಸಾರಿಗೆ ನೌಕರರ 38 ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು. 2024ರ ಜನವರಿ 1ರಿಂದ ಅನ್ವಯವಾಗುವಂತೆ ಹೊಸ ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ಸಿಬ್ಬಂದಿ ಮುಂದಾಗಿದ್ದರು.
ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಮುಖಂಡರ ಜೊತೆ ಸಭೆ ನಡೆಸಿ ಮುಷ್ಕರ ಹಿಂಪಡೆಯಲು ಮನವಿ ಮಾಡಿದರು. 38 ತಿಂಗಳ ಅರಿಯರ್ಸ್ ನೀಡಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದು ಸಭೆಯಿಂದ ಸಾರಿಗೆ ಮುಖಂಡರು ಹೊರ ನಡೆದರು.
ಹೀಗಾಗಿ ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಕುರಿತು ಮಾತನಾಡಿರುವ ಕಾರ್ಮಿಕ ಮುಖಂಡ ಅನಂತ ಸುಬ್ಬುರಾವ್, ಬೇಡಿಕೆ ಈಡೇರಿಕೆಗೆ ಸರ್ಕಾರ ಮುಂದಾಗಿಲ್ಲ. ವೇತನದ ಹೆಚ್ಚಳದ ಬಗ್ಗೆಯೂ ಭರವಸೆ ಕೊಟ್ಟಿಲ್ಲ. ಹೀಗಾಗಿ ನಾಳೆಯಿಂದ ಮುಷ್ಕರ ಇರುತ್ತದೆ ಎಂದಿದ್ದಾರೆ.
Key words: CM, Meeting, Transport staff, indefinite, strike, tomorrow