ಸಾರಿಗೆ ನೌಕರರು ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು : ಸಚಿವ ವಿ.ಸೋಮಣ್ಣ

ಮಂಗಳೂರು,ಡಿಸೆಂಬರ್,13,2020(www.justkannada.in) : ಯಡಿಯೂರಪ್ಪ ಸರಕಾರ ಯಾರನ್ನು ಹಸಿವಿನಿಂದ ಇರಲು ಬಿಡುವುದಿಲ್ಲ. ಸಾರಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವುದು ತಪ್ಪಲ್ಲ. ಆದರೆ, ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.logo-justkannada-mysoreರಾಜ್ಯಾದ್ಯಂತ ಸಾರಿಗೆ ನೌಕರರ ಪ್ರತಿಭಟನೆ ವಿಚಾರವಾಗಿ ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಪ್ರತಿ ತಿಂಗಳ ವೇತನ ಬಿಡುಗಡೆ ಮಾಡುವುದು ಎಷ್ಟು ಕಷ್ಟ ಅಂತ ಎಲ್ಲರಿಗೂ ತಿಳಿದಿದೆ. ಇದು ಹೋರಾಟ ಇವತ್ತಿನದಲ್ಲ. ತುಂಬಾ ವರ್ಷಗಳ ಹೋರಾಟ. ಆದರೆ, ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಮೂರು ತಿಂಗಳ ಸಂಬಳ ಬಿಡುಗಡೆ ಮಾಡಿದ್ದಾರೆ ಎಂದು ವಿವರಿಸಿದರು.

ಎಲ್ಲವನ್ನೂ ಕುಳಿತು ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಲಾಗುವುದು. ಇಂದು ಸಂಜೆಯ ಒಳಗಡೆ ಸಮಸ್ಯೆ ಇತ್ಯರ್ಥವಾಗುವ ಸಾಧ್ಯತೆ ಇದೆ. ನಾನು ಒಬ್ಬ ಸರಕಾರಿ ನೌಕರನಾಗಿ ದುಡಿದ ಅನುಭವ ಇದೆ. ಹೀಗಾಗಿ, ಸಾರಿಗೆ ನೌಕರರು ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Transportation-Employees-situation-should-be- understood-Minister-V.Somanna

key words : Transportation-Employees-situation-should-be- understood-Minister-V.Somanna