ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವವರನ್ನೂ ಮಾನವೀಯವಾಗಿ ನಡೆಸಿಕೊಂಡು ಆರೋಗ್ಯ ಸೇವೆ ನೀಡಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು ನವೆಂಬರ್,30,2023(www.justkannada.in):  ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯರಿಗೆ ಹೃದಯಸ್ಪರ್ಷಿ ಕಿವಿಮಾತು ಹೇಳಿದರು.‌

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದರು.

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840 ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ವಿವರಿಸಿದರು.

ಪ್ರತೀ ಜಿಲ್ಲೆಯಲ್ಲಿ MRI ಸ್ಕ್ಯಾನಿಂಗ್ ಸೌಲಭ್ಯ ಇರಬೇಕು. ಖಾಸಗಿ ಡಯಾಗ್ನಸ್ಟಿಕ್ ಸೆಂಟರ್ ಗಳಲ್ಲಿ ಸೇವಾವೆಚ್ಚ ದುಬಾರಿ ಆಗಿರುವುದರಿಂದ ಬಡವರಿಗೆ ಬಹಳ ಕಷ್ಟ ಆಗುತ್ತಿದೆ. ಈ ಕಾರಣಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾವಿರಾರು ಮಂದಿ ಬೇಡಿಕೆ ಅರ್ಜಿ ಕೊಡುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮ‌ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗುತ್ತಿದೆ. ಜಯದೇವ ಆಸ್ಪತ್ರೆಯಿಂದ ಉತ್ತಮ‌ಸೇವೆ ಸಾಧ್ಯ ಆಗಿರುವಾಗ ಉಳಿದ ಕಡೆಗಳಲ್ಲೂ ಅದೇ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ರಾಜ್ಯ ಸರ್ಕಾರ ಆ ದಿಕ್ಕಿನಲ್ಲಿ ಶ್ರಮಿಸುತ್ತಿದೆ ಎಂದು ಮೆಚ್ಚುಗೆ ಸೂಚಿಸಿ ಉತ್ತರ ಕರ್ನಾಟಕದ ಕಡೆ ಹೆಚ್ಚಿನ ‌ಗಮನ ನೀಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲಹೆ ನೀಡಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿದ್ದರು.

ENGLISH SUMMARY…

The government is committed to providing quality healthcare to the people of the state

Quality service provided in Jayadeva Hospital should be available in all government hospitals

Minister Dinesh Gundurao is bringing effective changes

Chief Minister Siddaramaiah dedicates 262 modern life saving ambulances to the people of the state

Treat those who come in old-dirty clothes humanely and provide health care: CM Siddaramaiah

Bangaluru , November 30: Chief Minister Siddaramaiah said that it is the government’s goal to see to it that quality healthcare services provided at Jayadeva Hospital should be available in all government hospitals.

He was speaking after dedicating 262 modern life-saving ambulances to public service in a programme held on the grand steps of Vidhana soudha , organized by the Health and Family Welfare Department.

Chief Minister Siddaramaiah called upon the doctors to treat the poor people who come in old and dirty clothes with humanity. They must get good health care without discrimination, he said.

The government is committed to providing quality healthcare to the people of the state. 108 emergency ambulances have been provided to the health service so that no one should lose their life without getting treatment. More than 840 ambulances are required in the state. 4 ambulances are functioning in each taluk and are providing emergency health services to hundreds of people every day. He explained that primary emergency treatment plays an important role in saving lives.

Every district should have MRI scanning facility. Due to the high cost of services in private diagnostic centers, the poor are facing a lot of hardships. Thousands of people are applying for the Chief Minister’s Relief Fund for this reason alone. Therefore, an environment is being created in the state where quality treatment is available only in government hospitals. When good service is possible from Jayadeva Hospital, it is possible to provide the same quality service in other places. The CM appreciated that the state government is working hard in that direction. He suggested to the health minister to focus more on North Karnataka.

MLA Rizwan Are had presided over the programme. DCM D.K Shivakumar, Health MInister Dinesh Fundraising and officers of the health department were present.

Key words: Treat – old clothes – dirty clothes- humanely -provide -health care – CM Siddaramaiah.