ವಿಧಾನಸೌಧದಲ್ಲೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ…

ಬೆಂಗಳೂರು,ಜೂ,24,2019(www.justkannada.in):  ವ್ಯಕ್ತುಯೊಬ್ಬ ವಿಧಾನಸೌಧದಲ್ಲೇ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ. ನಡೆದಿದೆ.

ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 332ರಲ್ಲಿ ಶೌಚಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆ ಆನೂರು ಮೂಲದ ಆರ್. ಆರ್‌.ರೇವಣ್ಣ ಕುಮಾರ್‌  ಎಂಬ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿರುವುದು. ಸದ್ಯ ರೇವಣ್ಣರನ್ನು ಬೌರಿಂಗ್‌ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ರೇವಣ್ಣಕುಮಾರ್ ಎಂಎಸ್ ಬಿಲ್ಡಿಂಗ್ ನಲ್ಲಿ ಗುತ್ತಿಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದಾರೆ. ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಲು ಕಾರಣವೇನೆಂಬುದು ತಿಳಿದು ಬಂದಿಲ್ಲ.

Key words: tried – commit suicide – strangling- vidanasoudha