ನಿಷ್ಠೆಯಿಂದ ಕೆಲಸ ಮಾಡುವುದೇ ನಿಜವಾದ ದೇಶ ಸೇವೆ- ಬಿ.ಆರ್.ಲಕ್ಷ್ಮಣರಾವ್

ಬೆಂಗಳೂರು,ಜನವರಿ,26,2023(www.justkannada.in):  “ನಾವೆಲ್ಲರೂ ನಮ್ಮ ಕೆಲಸಗಳನ್ನು ಪ್ರಾಮಾಣಿಕವಾಗಿ, ನಿಷ್ಠೆಯಿಂದ ಮಾಡಿದರೆ ಅದೇ ನಿಜವಾದ ದೇಶ ಸೇವೆ, ಮತ್ತೀನಿಲ್ಲ. ಭಾರತ ಬಲಿಷ್ಠವಾಗಿ ಬೆಳೆಯುತ್ತಿದ್ದರೂ, ಚಾರಿತ್ರಿಕವಾಗಿ ಇನ್ನೂ ಶೈಶಾವಸ್ಥೆಯಲ್ಲಿದೆ” ಎಂದು ಕವಿ, ಕಾದಂಬರಿಕಾರ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಆರ್. ಲಕ್ಷ್ಮಣರಾವ್ ಅಭಿಪ್ರಾಯಪಟ್ಟರು.

ಜಯನಗರ ನ್ಯಾಷನಲ್ ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರೆವೇರಿಸಿ ಅವರು ಮಾತನಾಡಿದರು. ಸದಾ ಸಂವಿಧಾನದ ಹಕ್ಕುಗಳ ಬಗ್ಗೆ ಪ್ರಶ್ನೆ ಮಾಡುತ್ತೇವೆಯೋ ಹೊರತು, ಅದರ ಕರ್ತ್ಯವ್ಯಗಳ ಪಾಲನೆಯನ್ನು ಮಾಡುವುದಿಲ್ಲ. ಇದು ಎಲ್ಲರಿಂದಲೂ ಆಗಬೇಕಾದ ಕೆಲಸ” ಎಂದು ಕಿವಿಮಾತು ಹೇಳಿದರು.

ಗಣರಾಜ್ಯೋತ್ಸವದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳಿಂದ ಪರೇಡ್ ಮತ್ತು ದೇಶಭಕ್ತಿ ಸಾರುವ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ.ಸಿ.ಕಮಲ, ಉಪ ಪ್ರಾಂಶುಪಾಲರಾದ ಪ್ರೊ.ಹೆಚ್.ಸಿ.ಬೆಲ್ಲದ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸಿ.ಆರ್.ಸಂಪತ್ ಕುಮಾರಿ, ಅಧ್ಯಾಪಕರು ಭಾಗವಹಿಸಿದ್ದರು.

Key words: True –national- service – work –faithfully- BR Laxman Rao