ಸತ್ಯವಂತರಿಗೆ ಇದು ಕಾಲವಲ್ಲ: ತನಿಖೆ ಮಾಡೋದೇ ತಪ್ಪು ಎಂದರೆ ಹೇಗೆ..? ಪ್ರತಿಭಟನಾಕಾರರಿಗೆ ಮಾರ್ಮಿಕವಾಗಿ ತಿರುಗೇಟು ನೀಡಿದ ಸಚಿವ ಸಿ.ಟಿ ರವಿ…

ಮೈಸೂರು,ಸೆ,11,2019(www.justkannada.in):  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯ ಪ್ರತಿಭಟನೆ ಕುರಿತು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸತ್ಯವಂತರಿಗೆ ಇದು ಕಾಲವಲ್ಲ. ಒಕ್ಕಲಿಗ ಸಮುದಾಯಕ್ಕೆ ಆದರ್ಶ ಆಗಬೇಕು ಎಂಬುದನ್ನು ಅವರೇ ತೀರ್ಮಾನ ಮಾಡಿಕೊಳ್ಳಲಿ. ಶಾಂತವೇರಿ‌ ಗೋಪಾಲಗೌಡರು, ಕುವೆಂಪು, ಕೆಂಗಲ್ ಹನುಮಂತಯ್ಯ ಅವರಂತಹ ಮಹನೀಯರು ಆದರ್ಶರಾಗಬೇಕೋ ಅಥವಾ ಇನ್ಯಾರು ಆದರ್ಶ ಆಗಬೇಕು ಎಂಬುದನ್ನು ತೀರ್ಮಾನ ಮಾಡಿಕೊಳ್ಳಲಿ ಎಂದು ಸಚಿವ ಸಿ.ಟಿ ರವಿ ಪ್ರತಿಭಟನಾಕಾರರಿಗೆ ಮಾರ್ಮಿಕವಾಗಿ ತಿರುಗೇಟು ನೀಡಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಸಿ.ಟಿ ರವಿ, ನಾನು ಸತ್ಯ ಹೇಳಿದರೆ ಕೆಲವರಿಗೆ ಅಪಥ್ಯವಾಗುತ್ತದೆ.  ಇ.ಡಿ.ಗೆ ಯಾವ ಜಾತಿ ಇದೆ, ಯಾವ ಪಕ್ಷ ಇದೆ. ಇಡಿ ಹುಟ್ಟುಹಾಕದವರು ಯಾರು..?ಇಡಿ ಹುಟ್ಟುಹಾಕಿದ್ದು  ಭಾರತೀಯ ಜನತಾ ಪಾರ್ಟಿ ಅಲ್ಲ. ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಸಂಬಂಧ ಇಡಿ ತನಿಖೆ ಮಾಡುತ್ತಿದೆ. ತನಿಖೆ ಮಾಡೋದೇ ತಪ್ಪು ಎಂದರೆ ಹೇಗೆ..? ಎಂದು ಪ್ರಶ್ನಿಸಿದರು.

Key words: truthful-wrong – investigate-mysore-minister- CT Ravi