Sunday, August 2, 2026

BDA Apartments

Home Crime ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ: ಬಸ್ ಸಂಪೂರ್ಣ ಭಸ್ಮ….

ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ: ಬಸ್ ಸಂಪೂರ್ಣ ಭಸ್ಮ….

ತುಮಕೂರು,ಮೇ,11,2019(www.justkannada.in):  ಚಲಿಸುತ್ತಿದ್ದ ಎಸ್ ಅರ್ ಎಸ್ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಇದರ ಪರಿಣಾಮ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಹೊರವಲಯದ ಕ್ಯಾಸಂದ್ರ ಬಳಿ ಈ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರಿನ ಕಡೆ ಬರುತ್ತಿದ್ದ ಎಸ್ ಅರ್ ಎಸ್ ಖಾಸಗಿ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸದ್ಯ ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಕ್ಯಾಸಂದ್ರ ಠಾಣಾ  ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: tumakur- Accidental -fire – private bus-burns