ಎರಡು ಪ್ರತ್ಯೇಕ ಅಪಘಾತದಲ್ಲಿ ಮೂವರು ದುರ್ಮರಣ…

ತುಮಕೂರು,ಜು,2,2019(www.justkannada.in):  ಎರಡು ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತುಮಕೂರಿನ ಶಿರಾ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಖಾಸಗಿ ಬಸ್ ಮತ್ತು ಟಾಟಾ ಏಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಹಾಗೆಯೇ ಶಿರಾ ಬಳಿಯ ತರೂರು ಗೇಟ್ ಬಳಿ ಲಾರಿ ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Key words: tumakur-trhee-died -two separate- accidents.