Tuesday, August 4, 2026

BDA Apartments

Home Crime ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ  ಸ್ಥಳದಲ್ಲೇ ರೈತ ಸಾವು…

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ  ಸ್ಥಳದಲ್ಲೇ ರೈತ ಸಾವು…

ತುಮಕೂರು,ಡಿ,27,2019(www.justkannada.in): ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಮಧುಗಿರಿ -ತುಮಕೂರು ಮುಖ್ಯರಸ್ತೆ ಚಿನಕವಜ್ರ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ. ಲಾರಿ ಹಾಗೂ ದ್ವಿಚಕ್ರವಾಹನದ ನಡುವೆ ನಡೆದ ಅಪಘಾತದಲ್ಲಿ ರೈತ ಸಾವನ್ನಪ್ಪಿದ್ದಾರೆ. ಮಧುಗಿರಿ-ತುಮಕೂರು ಮುಖ್ಯರಸ್ತೆಯಲ್ಲಿ ಸುಮಾರು ಅಪಘಾತ ಪ್ರಕರಣಗಳು ನಡೆದರೂ ತಾಲ್ಲೂಕು ಅಡಳಿತ ಮತ್ತು ಜಿಲ್ಲಾಡಳಿತ ಕ್ರಮಕೈಗೊಳ್ಳುತ್ತಿಲ್ಲ.  ಪದೇ ಪದೇ ಅಪಘಾತ ಪ್ರಕರಣಗಳು ಮತ್ತೆ ಮರುಕಳಿಸದಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮಧುಗಿರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words:  tumkur- Farmer –death-collision -between -lorry – bike