Thursday, September 24, 2026

BDA Apartments

Home Front Page ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು, ಕುಕ್ಕದೇ ಬಿಡುತ್ತಾ..? ಹೆಚ್.ಡಿಕೆಗೆ ಟ್ವಿಟ್ಟರ್ ನಲ್ಲಿ ತಿರುಗೇಟು ಕೊಟ್ಟ ...

ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು, ಕುಕ್ಕದೇ ಬಿಡುತ್ತಾ..? ಹೆಚ್.ಡಿಕೆಗೆ ಟ್ವಿಟ್ಟರ್ ನಲ್ಲಿ ತಿರುಗೇಟು ಕೊಟ್ಟ  ಮಾಜಿ ಸಿಎಂ ಸಿದ್ಧರಾಮಯ್ಯ..

ಬೆಂಗಳೂರು,ಸೆ,24,2019(www.justkannada.in): ನಿನ್ನೆ ಯಾರೋ ಹದ್ದಾಗಿ ಕುಕ್ಕಿತ್ತಲ್ಲೋ ಎಂದು ಭಾಷಣ ಮಾಡಿದ್ದಾರೆ. ಆದರೆ ಕೆ.ಹೆಚ್. ಮುನಿಯಪ್ಪರನ್ನು ಕುಕ್ಕಿದ್ದು ಯಾರು ಅಂತ ಅವರೇ ಹೇಳಲಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವಿಟ್ಟರ್ ನಲ್ಲೇ ಚಾಟಿ ಬೀಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹೌದು, ಹೆಚ್.ಡಿ.ಕುಮಾರಸ್ವಾಮಿ ಅವರೇ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ? ಎಂದು ಹೆಚ್.ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಸಾಕಿದ ಗಿಣಿಗಳು ಅವರನ್ನೇ ಹದ್ದಾಗಿ ಕುಕ್ಕಿದವು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಿನ್ನೆ ಯಾರೋ ಹದ್ದಾಗಿ ಕುಕ್ಕಿತ್ತಲ್ಲೋ ಎಂದು ಭಾಷಣ ಮಾಡಿದ್ದಾರೆ. ಆದರೆ ಕೆ.ಹೆಚ್. ಮುನಿಯಪ್ಪರನ್ನು ಕುಕ್ಕಿದ್ದು ಯಾರು ಅಂತ ಅವರೇ ಹೇಳಲಿ ಎಂದು  ಟೀಕಿಸಿದ್ದರು.

Key words: twitter- former cm-siddaramaiah-tong- HD kumaraswamy- Eagle- parrot