Monday, November 2, 2026

Dasara Wishes

Happy Dasara
Home Crime ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಆಟೋ ಚಾಲಕರು ಸಾವು

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಆಟೋ ಚಾಲಕರು ಸಾವು

ಮಂಗಳೂರು,ಜೂನ್,27,2024 (www.justkannada.in) : ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಪಾಂಡೇಶ್ವರ ಬಳಿ ನಡೆದಿದೆ.

ಪಾಂಡೇಶ್ವರದ ರೊಸಾರಿಯೋ ಶಾಲೆ ಬಳಿ ಈ ಘಟನೆ ನಡೆದಿದೆ. ರಾಜ ಮತ್ತು ದೇವರಾಜು ಮೃತಪಟ್ಟ ಆಟೋ ಚಾಲಕರು. ಮಳೆ ಆರ್ಭಟದಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಈ ನಡುವೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಆಟೋ ಚಾಲಕ ಒದ್ದಾಡುತ್ತಿದ್ದರು.ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಆಟೋ ಚಾಲಕರು ಸಾವು ...

ಇವರನ್ನ ರಕ್ಷಿಸಲು ಹೋದ ಮತ್ತೊರ್ವ ಆಟೋ ಚಾಲಕನೂ ಸಹ ಕರೆಂಟ್ ಶಾಕ್ ನಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: Two, auto drivers, died, electric, shock