ಮೈಸೂರು,ಅಕ್ಟೋಬರ್,18,2025 (www.justkannada.in): ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಹೊಸಕೆರೆಯಲ್ಲಿ ಈ ದುರಂತ ಸಂಭವಿಸಿದ್ದು, ಬದನಾಳು ಗ್ರಾಮದ ಚಂದನ್ (8) ಹಾಗೂ ಆರ್ಯ (10) ಸಾವನ್ನಪ್ಪಿದ ಬಾಲಕರು. ಇಬ್ಬರು ಬಾಲಕರು ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದು, ಕೆರೆಯ ಬಳಿ ಪೋಷಕರ ಆಕ್ರಂದನ ಮುಗಿಲುಮುಟ್ಟಿತು.
ಘಟನಾ ಸ್ಥಳಕ್ಕೆ ಬದನಾಳು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: two boys, swimming, drowned, dead, Mysore