ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ನೀರುಪಾಲು..

ಮೈಸೂರು,ಮೇ,23,2023(www.justkannada.in): ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ  ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ.

ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ಈ ಘಟನೆ ನಡೆದಿದೆ. ಲೋಹಿತ್(15), ಯತೀಶ್(13) ಮೃತಪಟ್ಟ ಬಾಲಕರು. ಇಬ್ಬರು ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ರವಿಗೌಡರ ಪುತ್ರರು.

ಸ್ನೇಹಿತರ ಜೊತೆ ಬೆಂಗಳೂರಿನಿಂದ ತಲಕಾಡಿಗೆ ಆಗಮಿಸಿದ್ದ ಬಾಲಕರು, ಈಜಲು ನದಿಗೆ ಇಳಿದಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನು ಅಲ್ಲೇ ಇದ್ದ ಅಂಬಿಗರಿಂದ 6 ಬಾಲಕರ ರಕ್ಷಣೆ ಮಾಡಲಾಗಿದೆ. ಮಕ್ಕಳ ಮೃತದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ತಲಕಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Two boys- swim -Cauvery river – drowned.