Friday, August 14, 2026

BDA Apartments

Home Crime ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಬಲಿ.

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಬಲಿ.

ಶಿವಮೊಗ್ಗ,ಜನವರಿ,16,2023(www.justkannada.in):  ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ನಿನ್ನೆ ಸಂಕ್ರಾಂತಿ ಹಬ್ಬ ಹಿನ್ನೆಲೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆ ವೇಳೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ಹೋರಿ ತಿವಿದು ಇಬ್ಬರು ಮೃತಪಟ್ಟಿದ್ದಾರೆ. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಬಳಿಯ ಮಾಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ರಂಗನಾಥ್ ಎಂಬ 24 ವರ್ಷದ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ  ಫಲಿಸದೆ ಇಂದು ಬೆಳಗ್ಗೆ ಯುವಕ ಮೃತಪಟ್ಟಿದ್ದಾನೆ.

ಶಿವಮೊಗ್ಗ ಜಿಲ್ಲೆಯಲ್ಲೇ ಮತ್ತೊಂದೆಡೆ ಶಿವಮೊಗ್ಗ ತಾಲೂಕಿನ ಕೊನಗನವಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಲೋಕೇಶ್(32) ಮೃತಪಟ್ಟಿದ್ದಾರೆ. ಮೃತ ಲೋಕೇಶ್ ರೈತಾಪಿ ವರ್ಗದವರಾಗಿದ್ದು, ಅವರಿಗೆ ಮೂರು ಮಕ್ಕಳಿದ್ದಾರೆ. ಕುಂಸಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: Two –death-bull – competition-shimogga