ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ರೈತರು ಸಾವು.

ಬೆಳಗಾವಿ,ಏಪ್ರಿಲ್,21,2023(www.justkannada.in):  ಹೊಲಕ್ಕೆ ಹೊರಟಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಜಿಲ್ಲೆಯ ಖಾನಾಪುರ ತಾಲೂಕಿನ ಗೋಧೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೊಧೋಳಿ ಗ್ರಾಮದ ಮಹಾಬಲೇಶ್ವರ ಶಿಂಧೆ (65), ಪುಂಡಲೀಕ ರೇಡೇಕರ(75) ಮೃತಪಟ್ಟ ರೈತರು.

ತಮ್ಮ ಹೊಲದಲ್ಲಿ ಬೆಳೆದಿದ್ದ ಕಬ್ಬಿಗೆ ನೀರು ಹಾಯಿಸಲು ಹೊರಟಿದ್ದ ನಾಲ್ವರು ರೈತರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Two-farmers -died – vehicle- collision.