ಬೆಂಗಳೂರು,ಅಕ್ಟೋಬರ್,30,2025 (www.justkannada.in): ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಮತ್ತು ಇಂಧನ ಸಚಿವ ಕೆ.ಜೆ ಜಾರ್ಜ್ ನಡುವೆ ಜಟಾಪಟಿ ನಡೆದಿದೆ ಎನ್ನಲಾಗಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲ್ಇ ಎಸ್ ಸಿ ಎಸ್ ಪಿ, ಟಿಎಸ್ ಪಿ ಹಣ ನೀಡದ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ ಹಾಗೂ ಕೆಜೆ ಜಾರ್ಜ್ ನಡುವೆ ವಾಕ್ಸಮರ ನಡೆದಿದೆ ಎನ್ನಲಾಗಿದೆ.
ಎಸ್ ಸಿಪಿ ಟಿಎಸ್ ಪಿ ಅನುದಾನ ಹಂಚಿಕೆಯಾಗಿಲ್ಲ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಎಸ್ ಸಿ ಪಿ, ಟಿ ಎಸ್ ಪಿಗೆ ಅನುದಾನ ಹಂಚಿಕೆ ಮಾಡದೇ ಇರುವುದು ಏಕೆ? ಏರು ಧ್ವನಿಯಲ್ಲೇ ಸಚಿವ ಹೆಚ್.ಸಿ ಮಹದೇವಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ನೇರವಾಗಿ ಸಿಎಂಗೆ ಹೇಳದೇ ಸಂಪುಟ ಸಹೋದ್ಯೋಗಿಗಳ ಮೇಲೆ ಸಚಿವ ಮಹದೇವಪ್ಪ ಅಸಮಾಧಾನ ಹೊರ ಹಾಕಿದ್ದಾರೆ. ಗಂಗಾಕಲ್ಯಾಣ ಯೋಜನೆಗೆ ಸಂಬಂಧಿಸಿದ ವಿಷಯದಲ್ಲಿ ಸಚಿವರ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ನಾನು ಎದ್ದು ಹೊರಟೇ ಬಿಡುತ್ತೇನೆ ಎಂಬುದಾಗಿ ಸಚಿವ ಮಹದೇವಪ್ಪ ಕೂಗಾಡಿದ್ದಾರೆ ಎನ್ನಲಾಗಿದೆ.
Key words: two ministers, cabinet meeting, Outrage, SCSP, TSP, money







