Wednesday, September 30, 2026

BDA Apartments

Home Crime ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು.

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು.

ಆನೇಕಲ್, ಜನವರಿ 19,2024(www.justkannada.in): ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ. ಜಾರ್ಖಂಡ್​​ ಮೂಲದ ಮಿನರ್​ ಬಿಸ್ವಾಸ್​​, ಶಾಹೀದ್​ ಮೃತಪಟ್ಟವರು. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು building-death building death

ಗಾಯಾಳುಗಳ ಪೈಕಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Key words: Two people –death- construction -school- building -collapsed.