ಬೈಕ್ ಗೆ  ಸರ್ಕಾರಿ ಬಸ್ ಡಿಕ್ಕಿಯಾಗಿ ತಂದೆ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವು.

ರಾಮನಗರ,ನವೆಂಬರ್,13,2023(www.justkannada.in):  ಬೈಕ್ ​ಗೆ ಕೆಎಸ್​ ಆರ್​ಟಿಸಿ ಬಸ್​ ಡಿಕ್ಕಿಯಾಗಿ ತಂದೆ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ  ಈ ಘಟನೆ ನಡೆದಿದೆ. ಬೈಕ್ ​ನಲ್ಲಿದ್ದ ಸಿದ್ದಪ್ಪ(65), ಅರುಣ(23) ಮೃತಪಟ್ಟವರು. ರಸ್ತೆ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ ಬೈಕ್ ಗೆ  ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.

ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಈ ಕುರಿತು ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Two people- died -on the spot- government bus-collided – bike.