Wednesday, August 26, 2026

BDA Apartments

Home Crime ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು ಸಾವು: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು ಸಾವು: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಸೆಪ್ಟಂಬರ್,5,2024 (www.justkannada.in): ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು ಸಾವನ್ನಪ್ಪಿ ಹಲವು ಮಕ್ಕಳು ಗಾಯಗೊಂಡಿದ್ದು ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡ ಸುದ್ದಿ ಕೇಳಿ ಸಂಕಟವಾಯಿತು.

ಮೃತ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು, ಮೃತ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು. ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖದಲ್ಲಿ ನಾನೂ ಭಾಗಿ ಎಂದು ತಿಳಿಸಿದ್ದಾರೆ.

Key words: Two school, children, died, accident, CM Siddaramaiah, condolence