ಲಿಫ್ಟ್ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು…

ಬೆಂಗಳೂರು,ಅಕ್ಟೋಬರ್,30,2020(www.justkannada.in): ಆಟವಾಡುತ್ತಿದ್ದ ವೇಳೆ ಲಿಫ್ಟ್ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.jk-logo-justkannada-logo

ಇಂದು ಬೆಳಿಗ್ಗೆ ಕೆಂಗೇರಿಯ ಕೋಡಿಪಾಳ್ಯದಲ್ಲಿ ಈ ಘಟನೆ ನಡೆದಿದೆ. ಉತ್ತರ ಕರ್ನಾಟಕ ಮೂಲದ ದಂಪತಿಯ ಪುತ್ರ ವಿನೋದ್(2) ಮೃತಪಟ್ಟ ಮಗು. ರಮೇಶ್ ಎಂಬುವವರ ಮಾಲೀಕತ್ವದ ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಗೆ ಬಿದ್ದು ಮಗು ಸಾವನ್ನಪ್ಪಿದೆ.two-year-old-baby-dies-falling-lift

ಆಟವಾಡುತ್ತಿದ್ದ ವೇಳೆ ವಿನೋದ್ ಲಿಫ್ಟ್​ನ ಗುಂಡಿಗೆ ಬಿದ್ದಿದ್ದು, ತೀವ್ರವಾಗಿ ಗಾಯಗೊಂಡ ವಿನೋದ್​ ನನ್ನ ತಕ್ಷಣ  ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ‌ ಮಗು ಸಾವನ್ನಪ್ಪಿದೆ.  ಈ ಕುರಿತು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Two-year-old- baby -dies – falling – lift