ಕೋಡಿಹಳ್ಳಿ ಚಂದ್ರಶೇಖರ್ ರಂತಹ ಎರಡು ತಲೆ ಹಾವುಗಳು ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ : ಸಚಿವ ಕೆ.ಎಸ್.ಈಶ್ವರಪ್ಪ 

ಶಿವಮೊಗ್ಗ,ಡಿಸೆಂಬರ್,14,2020(www.justkannada.in) : ಕೋಡಿಹಳ್ಳಿ ಚಂದ್ರಶೇಖರ್ ರಂತಹ ಎರಡು ತಲೆ ಹಾವುಗಳು ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ. ಇಂಥಹ ವ್ಯಕ್ತಿಗಳ ಬಗ್ಗೆ ಎಲ್ಲರೂ ಜಾಗೃತರಾಗಿರಬೇಕು. ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕು ಎನ್ನುವ ಉದ್ದೇಶದಿಂದ ಈ ಕೆಲಸ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.logo-justkannada-mysore

ಕೆಎಸ್ ಆರ್ ಟಿಸಿ ಸಿಬ್ಬಂದಿ ಬಂದ್ ವಾಪಸ್ ತೆಗೆದುಕೊಂಡಿರುವುದಕ್ಕೆ ಅವರನ್ನು ಅಭಿನಂದಿಸುತ್ತೇನೆ. ಆದರೆ, ಒಂದು ಲಕ್ಷಕ್ಕೂ ಹೆಚ್ಚು KSRTC ನೌಕರರನ್ನು ದಾರಿತಪ್ಪಿಸುವ ಕೆಲಸವನ್ನು ಕೋಡಿಹಳ್ಳಿ ಚಂದ್ರಶೇಖರ್ ಮಾಡಿದ್ದರು. ಇಂತಹ ವ್ಯಕ್ತಿಗಳ ಬಗ್ಗೆ ಎಲ್ಲರೂ ಜಾಗೃತರಾಗಿರಬೇಕು ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಅವರ ಹಿಂದೆ ಇನ್ಯಾರು ಇದ್ದು ಆಟವಾಡಿದ್ದಾರೆಯೋ ಗೊತ್ತಿಲ್ಲ. ಹುಳಿ ಹಿಂಡುವ ಕೋಡಿಹಳ್ಳಿ ಅಂತವರು ರಾಜ್ಯ ಹಾಗೂ ದೇಶವನ್ನು ಉದ್ದಾರ ಮಾಡುತ್ತಾರೆಯೇ ? ಅವರಿಗೂ ಕೆಎಸ್ ಆರ್ ಟಿಸಿ ನೌಕರರಿಗೂ ಏನು ಸಂಬಂಧವೋ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಕೋಡಿಹಳ್ಳಿ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಾವು ಗಮನಿಸುತ್ತೇವೆ. ನೌಕರರು ಪ್ರತಿಭಟನೆ ನಡೆಸಿದ್ದು ತಪ್ಪು ಎಂದು ಹೇಳುವುದಿಲ್ಲ, ಅದು ಅವರ ಹಕ್ಕು. ಅವರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸರ್ಕಾರ ಸ್ಪಂದಿಸಿತ್ತು. ಆದರೆ, ಕೋಡಿಹಳ್ಳಿ, ನೌಕರರು ಹಾಗೂ ರೈತರಿಗೆ ದ್ರೋಹ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಎಸ್ ಆರ್ ಟಿಸಿ ಮಾತ್ರವಲ್ಲ ರಾಜ್ಯದಲ್ಲಿ 50ಕ್ಕೂ ಹೆಚ್ಚು ನಿಗಮಗಳಿವೆ. ಈ ನಿಗಮಗಳಲ್ಲಿ ಐದು ಲಕ್ಷಕ್ಕೂ ಹೆಚ್ಚು ನೌಕರರಿಗೆ ಹೊರಗುತ್ತಿಗೆ ಆಧಾರದ ಮೇಲೆ ಎಂದು ನಮೂದಿಸಿಯೇ ನೇಮಕಾತಿ ಮಾಡಲಾಗುತ್ತದೆ. ಈ ಎಲ್ಲಾ ನಿಗಮಗಳ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಿದರೆ ಸಂಬಳ ನೀಡಲು ಸಾಲುವುದಿಲ್ಲ ಎಂದು ತಿಳಿಸಿದರು.

Two-head-snakes-like-Kodihalli-Chandrasekhar-ruining-state-Minister-K.S.Eshwarappa

key words : Two-head-snakes-like-Kodihalli-Chandrasekhar-ruining-state-Minister-K.S.Eshwarappa