ಸುಪ್ರೀಂಕೋರ್ಟ್ 49ನೇ ಮುಖ್ಯನ್ಯಾಯಮೂರ್ತಿಯಾಗಿ ಯು.ಯು ಲಲಿತ್  ಪ್ರಮಾಣ ವಚನ ಸ್ವೀಕಾರ.

ನವದೆಹಲಿ,ಆಗಸ್ಟ್,27,2022(www.justkannada.in):  ಸುಪ್ರೀಂ ಕೋರ್ಟ್ ನ 49ನೇ ​ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು ಲಲಿತ್ ಅವರು ಇಂದು  ಪ್ರಮಾಣ ವಚನ ಸ್ವೀಕಾರ ಮಾಡಿದರು.

ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಇಂದು ಯುಯು ಲಲಿತ್  ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರಿಗೆ ಪ್ರಮಾಣವಚನ ಬೋಧಿಸಿದರು.

Key words: U.U. Lalit -sworn – 49th- Chief Justice – Supreme Court.