ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲದಂತಾಗಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಬೆಂಗಳೂರು,ಜನವರಿ,31,2024(www.justkannada.in):  ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿಗಳು ರದ್ದು ಎಂಬ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್ ನೀಡಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಹೇಳುವುದನ್ನು ನೋಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್ ಇದೀಗ ಚುನಾವಣಾ ಸಮಯದಲ್ಲಿ ಆಶ್ವಾಸನೆ ನೀಡಿದ ಗ್ಯಾರಂಟಿಗಳನ್ನೂ ಈಡೇರಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್, ತನ್ನ ಚುನಾವಣಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿಲ್ಲ. ಖಂಡಿತವಾಗಿಯೂ ಮುಂದಿನ ಚುನಾವಣೆಯಲ್ಲಿ ಜನತೆ ಕೈ ಗೆ “ಕೈ” ಕೊಡಲಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಕುಟುಕಿದ್ದಾರೆ.

Key words: Guarantees – no guarantee -at all – Union Minister -Prahlad Joshi.