ಗಡಿ ವಿವಾದ ಕುರಿತು ಉದ್ಧವ್ ಠಾಕ್ರೆ ಹೇಳಿಕೆ ರಾಜಕೀಯ ಪ್ರೇರಿತ-  ಸಚಿವ ಅಶ್ವಥ್ ನಾರಾಯಣ್ ತಿರುಗೇಟು.

ಬೆಳಗಾವಿ,ಡಿಸೆಂಬರ್,27,2022(www.justkannada.in):  ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಕೋರ್ಟ್ ನಲ್ಲಿ ವಿಚಾರಣೆ ಮುಗಿಯುವವರೆಗೂ ಬೆಳಗಾವಿ, ನಿಪ್ಪಾಣಿ ಸೇರಿ ಗಡಿಭಾಗವನ್ನ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಹೇಳಿಕೆ ನೀಡಿದ ಮಹಾರಾಷ್ಟ್ರ ಮಾಜಿ ಸಿಎಂ ಉದ‍್ಧವ್ ಠಾಕ್ರೆಗೆ ಉನ್ನತ ಶಿಕ್ಷಣ ಸಚಿವ ಸಿ.ಎನ್ ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಅಶ್ವಥ್ ನಾರಾಯಣ್,  ಉದ‍್ಧವ್ ಠಾಕ್ರೆ ಮಾತಾಡುವ ಮುಂಚೆ ಸ್ವಲ್ಪ ಆಲೋಚಿದಬೇಕು.  ಜನರ ಭಾವನೆಗೆ ಧಕ್ಕೆ ತರುವ ಕೆಲಸವನ್ನ ಉದ್ಧವ್  ಠಾಕ್ರೆ ಮಾಡುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡಿರುವುದು ರಾಜಕೀಯ ಪ್ರೇರಿತ.  ಸ್ವಾರ್ಥಕ್ಕಾಗಿ  ಅಶ್ವಥ್ ನಾರಾಯಣ್ ಬೇಡದ  ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Key words: Uddhav Thackeray- statement – border dispute-Minister -Aswath Narayan