Thursday, August 20, 2026

BDA Apartments

Home Front Page ಉಡುಪಿ ಕಾಲೇಜು ವಿಡಿಯೋ ವಿವಾದ ಪ್ರಕರಣ ಎಸ್ ಐಟಿ ತನಿಖೆಗೆ ವಹಿಸಿ –ಮಾಜಿ ಸಚಿವ ಕೋಟ...

ಉಡುಪಿ ಕಾಲೇಜು ವಿಡಿಯೋ ವಿವಾದ ಪ್ರಕರಣ ಎಸ್ ಐಟಿ ತನಿಖೆಗೆ ವಹಿಸಿ –ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ.

ಬೆಂಗಳೂರು,ಆಗಸ್ಟ್,3,2023(www.justkannada.in): ಉಡುಪಿ ಕಾಲೇಜು ಶೌಚಾಲಯದಲ್ಲಿ  ವಿಡಿಯೋ ಚಿತ್ರೀಕರಣ ಪ್ರಕರಣವನ್ನ ಎಸ್ಐಟಿ  ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಬಿಜೆಪಿ ಎಂಎಲ್ ಸಿ ಕೋಟ ಶ್ರೀನಿವಾಸ ಪೂಜಾರಿ, ಪ್ರಕರಣ ಸಂಬಂಧ ನಾಳೆ ಮಧ್ಯಾಹ್ನ 12.30ಕ್ಕೆ ರಾಜ್ಯಪಾಲರಿಗೆ ದೂರು ನೀಡುತ್ತಿದ್ದೇವೆ. ಉಡುಪಿ, ಮಂಗಳೂರು ಭಾಗದ ಶಾಸಕರು ರಾಜಭವನಕ್ಕೆ ತೆರಳುತ್ತೇವೆ. ಪ್ರಕರಣವನ್ನು ಸರ್ಕಾರ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸುತ್ತಿದೆ. ಆದರೆ ಅಧಿಕಾರಿಗಳು ಸರ್ಕಾರದ ಮಾತು ಕೇಳಿ ತನಿಖೆ ಮಾಡುತ್ತಾರೆ. ಹೀಗಾಗಿ ಪ್ರಕರಣವನ್ನು ಎಸ್‌ಐಟಿಗೆ ವಹಿಸಿ ಸೂಕ್ತ ತನಿಖೆ ನಡೆಸಲಿ  ಎಂದು ಒತ್ತಾಯಿಸಿದರು.

Key words: Udupi College -video – case – investigate – SIT –Kota Srinivasa Pujari