ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ……

ಉಡುಪಿ,ಡಿ,28,2019(www.justkannada.in): ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿರುವ ಪೇಜಾವರ ಸ್ವಾಮೀಜಿಯವರ ಆರೋಗ್ಯ ಸ್ಥಿತಿಯು ತೀರಾ ಗಂಭೀರವಾಗಿದ್ದು ಅವರ ಪ್ರಜ್ಞೆಯ ಸ್ಥಿತಿಯಲ್ಲಿ ಇದುವರೆಗೆ ಯಾವುದೇ ಸುಧಾರಣೆ ಕಂಡು ಬಂದಿಲ್ಲ. ಇನ್ನೂ ಕೂಡ ಜೀವ ರಕ್ಷಕ ಸಾಧನಗಳ ಸಹಾಯದಲ್ಲಿ ಇದ್ದಾರೆ. ಅವರ ದೇಹ ಸ್ಥಿತಿಯಲ್ಲಿ ನಿನ್ನೆಯಿಂದ ಇಳಿಮುಖವಾಗಿದೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ.

ಮಣಿಪಾಲ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣವಾಗಿದೆ.ಪ್ರಜ್ಞೆಯ ಸ್ಥಿತಿಯಲ್ಲಿ ಇದುವರೆಗೆ ಯಾವುದೇ ಸುಧಾರಣೆ ಕಂಡು ಬಂದಿಲ್ಲ. ಅವರು ಜೀವರಕ್ಷಕ ಸಾಧನಗಳ ಸಹಾಯದಲ್ಲಿದ್ದಾರೆ ಎಂದಿದೆ.

 ಪೇಜಾವರ ಶ್ರೀಗಳಿಗೆ ಶುಕ್ರವಾರ ರಾತ್ರಿ ಎಂಆರ್ ಐ ಸ್ಕ್ಯಾನಿಂಗ್ ಮಾಡಲಾಗಿದೆ.ಇಂದು ಮತ್ತೊಂದು ಎಂಆರ್ ಐ ಸ್ಕ್ಯಾನಿಂಗ್ ಮಾಡಲಾಗುತ್ತದೆ. ಇನ್ನು ಆಸ್ಪತ್ರೆಗೆ ಗಣ್ಯರ ಭೇಟಿಯನ್ನ ರದ್ದು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: udupi- health condition – Mr. Pajavara Sri – more serious.